ದ್ವೇಷ ಭಾಷಣ: ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್’ಗೆ 3 ವರ್ಷ ಜೈಲು ಶಿಕ್ಷೆ
ಲಖನೌ: ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ಅವರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಪ್ರಕರಣದ ವಿಚಾರಣೆ ನಡೆಸಿದ ಉತ್ತರ ಪ್ರದೇಶದ ರಾಂಪುರದ ನ್ಯಾಯಾಲಯವು ಆಜಂ ಖಾನ್ ಸೇರಿ ಇತರೆ ಇಬ್ಬರು ಆರೋಪಿಗಳಿಗೆ ರೂ. 2 ಸಾವಿರ ದಂಡ ಸೇರಿದಂತೆ 3 ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
2019ರಲ್ಲಿ ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ಮತ್ತು ಐಎಎಸ್ ಅಧಿಕಾರಿ ಆಂಜನೇಯ ಕುಮಾರ್ ಸಿಂಗ್ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ವಂಚನೆ ಪ್ರಕರಣದಲ್ಲಿ ಖಾನ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಹಿನ್ನೆಲೆಯಲ್ಲಿ 2022ರ ಮೇ 20ರಂದು ಜೈಲಿನಿಂದ ಬಿಡುಗಡೆಯಾಗಿದ್ದರು. ಅವರು ಎರಡು ವರ್ಷ ಜೈಲಿನಲ್ಲಿದ್ದರು.