ರಾಜ್ಯ

67ನೇ ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಣೆ- ಸಿ. ಎಂ ಬೊಮ್ಮಾಯಿ

ಬೆಂಗಳೂರು: 67ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸುವ ಸಂಕಲ್ಪವನ್ನು ರಾಜ್ಯ ಸರ್ಕಾರ ಮಾಡಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ವಿಧಾನಸೌಧದ ಸಮ್ಮೇಳನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ನಾಳೆ ನಾಡಿನಾದ್ಯಂತ ಗ್ರಾಮಗಳಲ್ಲಿ, ನಗರಗಳಲ್ಲಿ, ಶಾಲೆ ಹಾಗೂ ಇತರೆ ಸಂಘ ಸಂಸ್ಥೆಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ರಾಜ್ಯೋತ್ಸವದ ಆಚರಿಸಬೇಕು ಹಾಗೂ ಕನ್ನಡದ ಧ್ವಜಗಳನ್ನು ಹಾರಿಸಬೇಕು ಎಂದು ಕರೆ ನೀಡಿದರು.

Leave a Reply

Your email address will not be published. Required fields are marked *

error: Content is protected !!