ಕರಾವಳಿ

ಎಸ್.ಡಿ.ಪಿ.ಐ ವತಿಯಿಂದ ಸವಣೂರಿನಲ್ಲಿ ಕನ್ನಡ ರಾಜ್ಯೋತ್ಸವ

ಸವಣೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಸವಣೂರು ಗ್ರಾಮ ಸಮಿತಿ ವತಿಯಿಂದ 67 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ದ್ವಜರೋಹಣ ಕಾರ್ಯಕ್ರಮ ನಡೆಯಿತು.


ಧ್ವಜಾರೋಹಣವನ್ನು ಸವಣೂರು ಗ್ರಾಮ ಸಮಿತಿಯ ಅಧ್ಯಕ್ಷರಾದ ರಝಾಕ್ ಕೆನರ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಸುಳ್ಯ ಕ್ಷೇತ್ರ ಸಮಿತಿ ಅದ್ಯಕ್ಷರಾದ ಇಕ್ಬಾಲ್ ಬೆಳ್ಳಾರೆ ಮಾತನಾಡಿ ಸಮೃದ್ಧ,ಸದೃಢ,ಸ್ವಾಭಿಮಾನದ ಕರ್ನಾಟಕಕ್ಕಾಗಿ ಎಲ್ಲರೂ ಒಟ್ಟಾಗಿ ಪಣತೊಟ್ಟು ರಾಜ್ಯದ ಸಂಸ್ಕೃತಿ ಮತ್ತು ಇತಿಹಾಸವನ್ನು ಉಳಿಸಿ ಬೆಳೆಸಬೇಕಾಗಿದೆ ಎಂದರು.


ಕಾರ್ಯಕ್ರಮದಲ್ಲಿ ಸುಳ್ಯ ಕ್ಷೇತ್ರ ಸಮಿತಿ ಕಾರ್ಯದರ್ಶಿ ರಫೀಕ್ ಎಂ ಎ,ಸವಣೂರು ಬ್ಲಾಕ್ ಕಾರ್ಯದರ್ಶಿ ಶರೀಫ್ ಎನ್, ಬೆಳ್ಳಾರೆ ಬ್ಲಾಕ್ ಅಧ್ಯಕ್ಷರಾದ ಹಮೀದ್ ಮರಕಡ,ಪಕ್ಷದ ಮುಖಂಡರಾದ ಸುಲೈಮಾನ್ ಪಲ್ಲತಮೂಲೆ ಇನ್ನಿತರರು ಉಪಸ್ಥಿತರಿದ್ದರು.
ಗ್ರಾಮ ಸಮಿತಿ ಕಾರ್ಯದರ್ಶಿ ರಫೀಕ್ ಪಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಸಾರ್ವಜನಿಕರಿಗೆ ಸಿಹಿತಿಂಡಿ ವಿತರಿಸಲಾಯಿತು.

Leave a Reply

Your email address will not be published. Required fields are marked *

error: Content is protected !!