ರಾಜ್ಯದ ಬಿಜೆಪಿಯ ಪ್ರಭಾವಿ ಶಾಸಕನಿಗೆ ಆಶ್ಲೀಲ ವಿಡಿಯೋ ಕಾಲ್ ಮಾಡಿ ಹನಿಟ್ರ್ಯಾಪ್!
ಚಿತ್ರದುರ್ಗ : ಬಿಜೆಪಿಯ ಪ್ರಭಾವಿ ಶಾಸಕ ತಿಪ್ಪಾರೆಡ್ಡಿ ಅವರನ್ನು ಹನಿಟ್ರ್ಯಾಪ್ ಬಲೆ ಬೀಳಿಸುವ ಯತ್ನ ನಡೆದಿದೆ. ಅಪರಿಚಿತ ಮಹಿಳೆ ನಗ್ನವಾಗಿ ವಿಡಿಯೋ ಕಾಲ್ ಮಾಡಿದ್ದು, ಅಶ್ಲೀಲ ವಿಡಿಯೋ ಕಳುಹಿಸಿದ್ದಾಳೆ. ಈ ಕುರಿತು ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ ಅವರು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
ವಾಟ್ಸಾಪ್ ಮೂಲಕ ಕರೆ ಮಾಡಿ ಶಾಸಕರನ್ನು ಹನಿಟ್ರ್ಯಾಪ್ ಗೆ ಬೀಳಿಸುವ ಕಾರ್ಯವನ್ನು ಮಾಡಲಾಗಿತ್ತು. ಆದರೆ ಶಾಸಕರು ಎಚ್ಚೆತ್ತುಕೊಂಡು ಕಾಲ್ ಬ್ಲಾಕ್ ಮಾಡಿದ್ದಾರೆ. ಮಾತ್ರವಲ್ಲ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.
ಸದ್ಯ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ರಾಜ್ಯದಲ್ಲಿ ಹಲವು ಶಾಸಕರನ್ನು ಹನಿಟ್ರ್ಯಾಪ್ ಗೆ ಸಿಲುಕಿಸುವ ಯತ್ನ ನಡೆಯುತ್ತಿದೆ ಅನ್ನೋ ಹೊತ್ತಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.