ಹೊಸ ಅವಿಷ್ಕಾರದೊಂದಿಗೆ ಮತ್ತೆ ಬಂದ ‘ಡ್ರೋನ್’ ಪ್ರತಾಪ್
ಬೆಂಗಳೂರು: ತಾನೊಬ್ಬ ಯುವ ವಿಜ್ಞಾನಿ, ಡ್ರೋನ್ ತಯಾರಿಸಿದ್ದೇನೆ ಎಂದು ಹೇಳಿ ವ್ಯಾಪಕ ಸುದ್ದಿಯಲ್ಲಿದ್ದು, ಬಳಿಕ ವಿವಾದಕ್ಕೆ ಸಿಲುಕಿದ್ದ ಡ್ರೋನ್ ಪ್ರತಾಪ್ 2 ವರ್ಷಗಳ ಬಳಿಕ ಇದೀಗ ಮತ್ತೆ ಕಾಣಿಸಿಕೊಂಡಿದ್ದಾರೆ.

ಡ್ರೋನ್ ತಯಾರಿಸಿದ್ದೇನೆ ಎಂದು ಸುಳ್ಳು ಹೇಳಿ ಪೊಲೀಸ್ ವಿಚಾರಣೆಯನ್ನೂ ಎದುರಿಸಿದ್ದ ಡ್ರೋನ್ ಪ್ರತಾಪ್ ಬಳಿಕ ನಾಪತ್ತೆಯಾಗಿದ್ದರು. ಇದೀಗ ಮತ್ತೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪ್ರತ್ಯಕ್ಷರಾಗಿದ್ದಾರೆ.
ಈ ಬಾರಿ ಮತ್ತೇನೋ ನೂತನವಾಗಿ ಪ್ರಾರಂಭಿಸುತ್ತಿದ್ದೇನೆಂದು ಮುನ್ಸೂಚನೆ ನೀಡಿದ್ದಾರೆ. ಟೇಬಲ್ ಮೇಲೊಂದು ಲ್ಯಾಪ್ಲಾಪ್ ಇಟ್ಟುಕೊಂಡಿರುವ ಡ್ರೋನ್ ಪ್ರತಾಪ್ ಅದಕ್ಕೆ ಡಾಟಾ ಕೇಬಲ್ ಅವಳವಡಿಸಿರುವ ಯಾವುದೋ ಒಂದು ಸಾಧನವನ್ನು ತಮ್ಮ ಮುಂದಿಟ್ಟುಕೊಂಡಿದ್ದಾರೆ. ಎರಡು ಕೈಗಳಿಗೆ ಹಳದಿ ಬಣ್ಣದ ಗ್ಲೌಸ್ ಹಾಗೂ ಕಣ್ಣಿಗೆ ಸುರಕ್ಷಿತ ಕನ್ನಡಕ ಧರಿಸಿ, ಒಂದು ಕೈಯಲ್ಲಿ ಸೋಲ್ಡರಿಂಗ್ ಗೇರ್ ಹಿಡಿದು ನಗುತ್ತಾ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.