Uncategorizedರಾಷ್ಟ್ರೀಯ

ಗುಜರಾತ್ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟ

ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಇಂದು ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ಡಿಸೆಂಬರ್ 1 ರಂದು ಮೊದಲ ಚುನಾವಣೆ ನಡೆಯಲಿದ್ದು, ಡಿಸೆಂಬರ್ 5ರಂದು ಎರಡನೇ ಹಾಗೂ ಅಂತಿಮ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.

ಡಿ. 1 ರಂದು ಮೊದಲ ಹಂತದಲ್ಲಿ 89 ಕ್ಷೇತ್ರಗಳಿಗೆ ಮತ್ತು ಡಿ. 5 ರಂದು ಎರಡನೇ ಹಂತದಲ್ಲಿ 93 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

4.9 ಕೋಟಿ ಮತದಾರರು ಈ ಬಾರಿ ತಮ್ಮ ಹಕ್ಕನ್ನು ಚಲಾಯಿಸಲು ಸಿದ್ಧರಾಗಿದ್ದಾರೆ. 51 ಸಾವಿರ ಮತಗಟ್ಟೆಯಲ್ಲಿ ಮತದಾನದ ಪ್ರಕಿಯೆ ನಡೆಯಲಿದೆ.

182 ಸದಸ್ಯರ ಸಂಖ್ಯಾಬಲದ ಗುಜರಾತ್ ವಿಧಾನಸಭೆಯ ಅವಧಿ ಮುಂದಿನ ವರ್ಷ ಫೆಬ್ರವರಿ 18ಕ್ಕೆ ಕೊನೆಯಾಗಲಿದೆ.

Leave a Reply

Your email address will not be published. Required fields are marked *

error: Content is protected !!