ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ
ಇಸ್ಲಾಮಾಬಾದ್: ರಾಜಕೀಯ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮೇಲೆ ನ.3ರಂದು ಗುಂಡು ಹಾರಿಸಲಾಗಿದೆ. ಇಮ್ರಾನ್ ಅವರ ಕಾಲಿಗೆ ಗುಂಡೇಟು ಬಿದ್ದಿದ್ದರೂ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

ಗುಜ್ರಾನ್‌ವಾಲಾ ನಗರದ, ಅಲ್ಲಾಹ್‌ವಾಲ ಚೌಕ್ ಬಳಿ ರ‍್ಯಾಲಿ ಸಾಗುತ್ತಿದ್ದ ವೇಳೆ ಜನಸಂದಣಿಯಿಂದ ಗುಂಡು ಹಾರಿ ಬಂದಿದೆ. ಗಾಯಗೊಂಡಿರುವ ಇಮ್ರಾನ್ ಖಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಸಹಾಯಕ ರವೂಫ್ ಹಸನ್ ತಿಳಿಸಿದ್ದಾರೆ.
ಇಮ್ರಾನ್ ಅವರನ್ನು ಹತ್ಯೆ ಮಾಡುವ ಪ್ರಯತ್ನ ಎನ್ನಲಾಗಿದ್ದು ಒಬ್ಬ ದಾಳಿಕೋರನನ್ನು ಗುಂಡಿಕ್ಕಿ ಕೊಲ್ಲಲಾಗಿದ್ದು, ಮತ್ತೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಖಾನ್ ಅವರು ಕಳೆದ ಶುಕ್ರವಾರದಿಂದ ಲಾಹೋರ್ ನಗರದಿಂದ ರಾಜಧಾನಿ ಇಸ್ಲಾಮಾಬಾದ್ ವರೆಗೆ ಮೆರವಣಿಗೆಯನ್ನು ಕೈಗೊಂಡಿದ್ದಾರೆ.