ಕರಾವಳಿಕ್ರೈಂ

ವಿಟ್ಲ: ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು – ಮೂವರ ಬಂಧನ



ವಿಟ್ಲ: ಕೊಳ್ನಾಡು ಗ್ರಾಮದ ಅಪ್ರಾಪ್ತ ಬಾಲಕಿಯನ್ನು
ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರವೆಸಗಿದ ಆರೋಪದ ಮೇಲೆ ವಿಟ್ಲ ಠಾಣಾ ಪೊಲಿಸರು ಪೋಕ್ಸೋ ಕಾಯ್ದೆಯಡಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪ್ರಕರಣದಲ್ಲಿ ಒಟ್ಟು ನಾಲ್ವರು ಆರೋಪಿಗಳ ಪೈಕಿ ಮೂವರ ಬಂಧನವಾದಂತಾಗಿದೆ.

ಕಬಕ ನಿವಾಸಿ ಸಂಶೀರ್ ಬಂಧಿತ ಆರೋಪಿ. ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ, ಅಪ್ರಾಪ್ತ ಬಾಲಕಿಯನ್ನು ಈತ ಪ್ರೀತಿಸುವ ನಾಟಕವಾಡಿ ಬಳಿಕ ಆಕೆಯ ಮನೆಗೆ ತೆರಳಿ ಬಲಾತ್ಕಾರವಾಗಿ ಆಕೆಯೊಂದಿಗೆ ದೈಹಿಕ ಸಂಪರ್ಕ ನಡೆಸಿದ್ದಾಗಿ ಸಂತ್ರಸ್ಥೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.

ಈ ಬಗ್ಗೆ ಪೊಲೀಸರು ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ವಿಟ್ಲ, ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ ನಾಗರಾಜ್ ನೇತೃತ್ವದಲ್ಲಿ ಎಸ್‌. ಐ. ಸಂದೀಪ್ ಶೆಟ್ಟೀರವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.

ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಅಪ್ರಾಪ್ತ ವಯಸ್ಸಿನ ಬಾಲಕಿ ನಾಪತ್ತೆ ಆಗಿರುವ ಬಗ್ಗೆ ಅ.23ರಂದು ಆಕೆಯ ಪೋಷಕರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅ.24 ರಂದು ಆಕೆಯನ್ನು ಪತ್ತೆಹಚ್ಚಿ ಕರೆತಂದಿದ್ದರು. ಪೋಷಕರೊಂದಿಗೆ ತೆರಳಲು ಒಪ್ಪದ ಹಿನ್ನೆಲೆಯಲ್ಲಿ ಆಕೆಯನ್ನು ಮಂಗಳೂರಿನ ಪ್ರಜ್ಞಾಸಲಹಾ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಅಲ್ಲಿ ಬಾಲಕಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಬಾಲಕಿ ತನ್ನ ಮೇಲೆ ಅತ್ಯಾಚಾರ ನಡೆದಿರುವ ವಿಚಾರ ತಿಳಿಸಿದ್ದರು. ಬಳಿಕ ನೊಂದ ಬಾಲಕ ನೀಡಿದ ದೂರಿನಂತೆ ಆರೋಪಿಗಳಾದ ಸಜಾದ್‌, ಆಸೀಫ್, ಶಾಫಿ ಎಂಬವರ ಮೇಲೆ ಈಗಾಗಲೇ ದಾಖಲಾದ ಪ್ರಕರಣಕ್ಕೆ ಫೋಕ್ಲೋ ಕಾಯ್ದೆ ಅಳವಡಿಸಲಾಗಿದ್ದು, ಸಜಾದ್ ಎಂಬಾತನನ್ನು ಪೊಲೀಸರು ದಸ್ತಗಿರಿ ಮಾಡಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆಸೀಫ್ ಎಂಬಾತನು ಈಗಾಗಲೇ ವಾರಂಟ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ನೊಂದ ಬಾಲಕಿಯ ಹೇಳಿಕೆಯ ಆಧಾರದಲ್ಲಿ, ಸೆಪ್ಟೆಂಬರ್ ತಿಂಗಳಿನಲ್ಲಿ ಆರೋಪಿ ಸಂಶೀರ್ ಎಂಬಾತನು ನೊಂದ ಬಾಲಕಿಯ ಮನೆಯಲ್ಲಿ ಲೈಂಗಿಕ ಅತ್ಯಾಚಾರ ಮಾಡಿರುವ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿ ಸಂಶೀರ್‌ನನ್ನು ಇದೀಗ ಬಂಧಿಸಲಾಗಿದೆ.

ಬಾಲಕಿ ನೀಡಿದ ಮಾಹಿತಿ ಆಧಾರದಲ್ಲಿ ಒಟ್ಟು ಎರಡು ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಒಟ್ಟು 3 ಆರೋಪಿಗಳ ಬಂಧನವಾಗಿದ್ದು, ಉಳಿದಿರುವ ಓರ್ವನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!