ರಾಜ್ಯ

ಕ್ರೇನ್ ಚಕ್ರಕ್ಕೆ ಸಿಲುಕಿ ಕಾಲೇಜು ವಿದ್ಯಾರ್ಥಿನಿ ದಾರುಣ ಸಾವು

ಮಹದೇವಪುರ: ಇಲ್ಲಿನ ಕನ್ನಮಂಗಲ ಗೇಟ್ ಬಳಿ ಕ್ರೇನ್ ಚಕ್ರಕ್ಕೆ ಸಿಲುಕಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

19 ವರ್ಷದ ಬಿಕಾಂ ವಿದ್ಯಾರ್ಥಿನಿ ನೂರ್ ಫಿಜಾ ಎಂದು ಗುರುತಿಸಲಾಗಿದ್ದು, ಕನ್ನಮಂಗಲ ಬಸ್ ನಿಲ್ದಾಣದಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅಪಘಾತಕ್ಕೆ ಕ್ರೇನ್ ನಿರ್ವಾಹಕರ ಅಜಾಗರೂಕ ಚಾಲನೆಯೇ ಕಾರಣ ಎನ್ನಲಾಗಿದೆ.

ಕೂಡಲೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ತೀವ್ರವಾಗಿ ಗಾಯಗೊಂಡ ನೂರ್ ಸಾವನ್ನಪ್ಪಿದ್ದಾಳೆ. ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

error: Content is protected !!