‘ಕಿಂಗ್ ಕೊಹ್ಲಿ’ಗಿಂದು 34ನೇ ಹುಟ್ಟು ಹಬ್ಬದ ಸಂಭ್ರಮ
ಬೆಂಗಳೂರು: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರಿಗೆ ಇಂದು (ಶನಿವಾರ) 34ನೇ ಹುಟ್ಟುಹಬ್ಬದ ಸಂಭ್ರಮ.

ಕೊಹ್ಲಿ ಹುಟ್ಟುಹಬ್ಬದ ಅಂಗವಾಗಿ ಹಿರಿಯ ಕ್ರಿಕೆಟಿಗರು, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ), ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಐಪಿಎಲ್ ಫ್ರಾಂಚೈಸಿ ಆರ್‌ಸಿಬಿ ಸೇರಿದಂತೆ ಅನೇಕ ಅಭಿಮಾನಿಗಳು ಶುಭ ಕೋರಿದ್ದಾರೆ.
ಟೀಮ್ ಇಂಡಿಯಾದ ಮಾಜಿ ನಾಯಕ ಮತ್ತು ಅತ್ಯುತ್ತಮ ಬ್ಯಾಟರ್‌ಗಳಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಬಿಸಿಸಿಐ ಟ್ವೀಟ್ ಮಾಡಿದೆ.
ವಿಶ್ವ ಕ್ರಿಕೆಟ್‌ನ ಅತ್ಯಂತ ನಿರ್ಭೀತ ಆಟಗಾರರಲ್ಲಿ ಒಬ್ಬರಾದ ‘ನಮ್ಮ ವಿರಾಟ ರಾಜ’ನಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಆರ್‌ಸಿಬಿ ಟ್ವೀಟ್ ಮಾಡಿದ್ದಾರೆ.
ಜನ್ಮದಿನದ ಶುಭಾಶಯಗಳು ಸಹೋದರ, ನಿಮಗೆ ಯಾವಾಗಲೂ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ ಎಂದು ಟೀಮ್ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಟ್ವೀಟ್ ಮಾಡಿದ್ದಾರೆ.
ವಿರಾಟ್ ಕೊಹ್ಲಿ ಅವರಿಗೆ ಜನ್ಮದಿನದ ಶುಭಾಶಯಗಳು ಎಂದು ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಐಯ್ಯರ್ ಟ್ವೀಟ್ ಮಾಡಿದ್ದಾರೆ.
ಯಾರೊಬ್ಬರೂ ನಂಬದಿದ್ದಾಗ ನಂಬಿಕೆ ಇಟ್ಟಿದ್ದು ಕೊಹ್ಲಿ. ಅವರಿಗೆ ಜನ್ಮದಿನದ ಶುಭಾಶಯಗಳು ಎಂದು ಟೀಮ್ ಇಂಡಿಯಾದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.
ಕ್ರಿಕೆಟ್ ದಂತಕಥೆಗೆ (ಕೊಹ್ಲಿ) ಜನ್ಮದಿನದ ಶುಭಾಶಯಗಳು. ಟಿ20 ವಿಶ್ವಕಪ್ ಟ್ರೋಫಿಯೊಂದಿಗೆ ತವರಿಗೆ ತನ್ನಿ ಎಂದು ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಟ್ವೀಟ್ ಮಾಡಿದ್ದಾರೆ.