ಪುತ್ತೂರು: ಸಾರೆಪುಣಿಯಲ್ಲಿ ದಂಪತಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಪುತ್ತೂರು: ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ದಂಪತಿ ಅದೃಷ್ಟವಶಾತ್ ಪಾರಾದ ಘಟನೆ ನ.5ರಂದು ಕುಂಬ್ರ ಸಮೀಪದ ಕೊಳ್ಳಾಜೆಯಲ್ಲಿ ನಡೆದಿದೆ.
ಬೆಳ್ಳಾರೆ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಮಾರುತಿ ಕಾರು ಕೊಳ್ಳಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಚರಂಡಿಗೆ ಪಲ್ಟಿಯಾಗಿದ್ದು ಕಾರು ಚಲಾಯಿಸುತ್ತಿದ್ದ ಉಪ್ಪಿನಂಗಡಿಯ ಗೋಪಾಲಕೃಷ್ಣ ಭಟ್ ಅವರ ಪತ್ನಿ ಯಾವುದೇ ಗಾಯಗಳಿಲ್ಲದೇ ಪಾರಾಗಿದ್ದಾರೆ