ಧಗಧಗನೆ ಹೊತ್ತಿ ಉರಿದ ಟೆಂಪೋ ಟ್ರಾವೆಲರ್
ತುಮಕೂರು: ಟೆಂಪೋ ಟ್ರಾವೆಲರ್ ಧಗಧಗನೆ ಹೊತ್ತಿ ಉರಿದಿದೆ. ಈ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬಿದನಗೆರೆ ಕ್ರಾಸ್ ಬಳಿ ನಡೆದಿದೆ.
ಹಾಸನದಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಿಟಿ ವಾಹನದಲ್ಲಿ ಮಗು ಸೇರಿ ಒಟ್ಟು ಹತ್ತು ಮಂದಿ ಇದ್ದರು.ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಟಿಟಿ ನಿಲ್ಲಿಸಿ ಚಾಲಕ ಎಲ್ಲರನ್ನೂ ಕೆಳಗಿಳಿಸಿದ್ದ.
ಘಟನೆಗೆ ಕಾರಣ ತಿಳಿದುಬಂದಿಲ್ಲ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.