ರಾಷ್ಟ್ರೀಯ

ಅತ್ಯಾಚಾರ ಆರೋಪ: ಶ್ರೀಲಂಕಾ ಬ್ಯಾಟ್ಸ್’ಮೆನ್ ಧನುಷ್ಕ ಗುಣತಿಲಕ ಆಸ್ಟ್ರೇಲಿಯಾದಲ್ಲಿ ಬಂಧನ

ಸಿಡ್ನಿ: ಅತ್ಯಾಚಾರದ ಆರೋಪದ ಮೇಲೆ ಶ್ರೀಲಂಕಾ ಬ್ಯಾಟರ್ ಧನುಷ್ಕ ಗುಣತಿಲಕ ಅವರನ್ನು ಸಿಡ್ನಿ ಪೊಲೀಸರು ನ. 6ರಂದು ಬೆಳಿಗ್ಗೆ ಬಂಧಿಸಿದ್ದಾರೆ.

ಸಿಡ್ನಿಯ 29 ವರ್ಷದ ಮಹಿಳೆ ಗುಣತಿಲಕ ಅವರ ಮೇಲೆ ಅತ್ಯಾಚಾರದ ದೂರು ನೀಡಿದ್ದಾರೆ.

ರೋಸ್‌ಬೇಯಲ್ಲಿ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದ್ದು, ಗುಣತಿಲಕ ಆನ್‌ಲೈನ್ ಡೇಟಿಂಗ್ ಆ್ಯಪ್ ಮೂಲಕ ಮಹಿಳೆಯೊಬ್ಬರ ಸಂಪರ್ಕ ಮಾಡಿದ್ದರು. ಬಳಿಕ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2015 ರಿಂದ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿರುವ ಗುಣತಿಲಕ, ಪ್ರಸ್ತುತ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ಗಾಗಿ ಆಸ್ಟ್ರೇಲಿಯಾಕ್ಕೆ ತೆರಳಿದ್ದರು.

Leave a Reply

Your email address will not be published. Required fields are marked *

error: Content is protected !!