ಕರಾವಳಿಕ್ರೀಡೆರಾಜ್ಯ

ಕಬಕದಲ್ಲಿ ಅಂತರ್ರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣ:
ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಅಂತರ್ರಾಷ್ಟ್ರೀಯ ಮಟ್ಟಕ್ಕೆ ಬೆಳೆಸಲು ಇದು ಸಹಕಾರಿಯಾಗಲಿದೆ-ಅಮ್ಜದ್ ಖಾನ್ ಪೋಳ್ಯ

ಪುತ್ತೂರು: ಕಬಕದಲ್ಲಿ ಸುಮಾರು 23 ಎಕರೆ ಜಮೀನಿನಲ್ಲಿ ಅಂತರ್ರಾಷ್ಟ್ರೀಯ ಗುಣಮಟ್ಟದ ಕ್ರಿಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಸರಕಾರ ಅನುಮೋದನೆ ನೀಡಿರುವುದು ಸಂತಸ ತಂದಿದೆ. ಗ್ರಾಮೀಣ ಪ್ರದೇಶವೇ ಹೆಚ್ಚು ಇರುವ ತಾಲೂಕಿನಲ್ಲಿ ಗ್ರಾಮೀಣ ಕ್ರೀಡಾಪಟುಗಳ ಪ್ರತಿಭೆ ಅನಾವರಣಗೊಳಿಸಲು ಈ ಕ್ರೀಡಾಂಗಣ ಸಹಕಾರಿಯಾಗಲಿದೆ ಎಂದು ಪುತ್ತೂರು ಕಮ್ಯುನಿಟಿ ಸೆಂಟರ್‌ನ ಅಧ್ಯಕ್ಷ ಅಮ್ಜದ್ ಖಾನ್ ಪೋಳ್ಯ ತಿಳಿಸಿದ್ದಾರೆ.

ಅಮ್ಜದ್ ಖಾನ್ ಪೋಳ್ಯ

ಬೆಳೆಯುತ್ತಿರುವ ಪುತ್ತೂರು ಪಟ್ಟಣದಲ್ಲಿ ಇಂತಹ ಯೋಜನೆ ಭವಿಷ್ಯದ ದೃಷ್ಠಿಯಿಂದಲೂ ಮಹತ್ವಪೂರ್ಣವಾಗಿದೆ. ದೂರದೃಷ್ಟಿಯೊಂದಿಗೆ ಕಬಕದಲ್ಲಿ ಕ್ರೀಡಾಂಗಣ ನಿರ್ಮಾಣ ವಿಚಾರದಲ್ಲಿ ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಿದ ಶಾಸಕ ಸಂಜೀವ ಮಠಂದೂರು ಅವರ ಕಾರ್ಯ ಶ್ಲಾಘನೀಯವಾಗಿದ್ದು ಅದಕ್ಕಾಗಿ ಶಾಸಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಅಮ್ಜದ್ ಖಾನ್ ಹೇಳಿದರು.

ಸಾಂದರ್ಭಿಕ ಚಿತ್ರ

ಕ್ರೀಡಾ ಕ್ಷೇತ್ರದಲ್ಲಿ ತಾಲೂಕಿನ ಹಲವಾರು ಪ್ರತಿಭೆಗಳನ್ನು ಪ್ರೊತ್ಸಾಹಿಸುವ ಅವಶ್ಯಕತೆಯಿದ್ದು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಪ್ರತಿಭೆಗಳನ್ನು ಕ್ರೀಡೆಯಲ್ಲಿ ಬೆಳೆಸಲು ಈ ಕ್ರೀಡಾಂಗಣ ಸಹಕಾರಿಯಾಗಲಿದೆ. ಇಂತಹ ಕ್ರೀಡಾಂಗಣಗಳು ತಾಲೂಕಿನಲ್ಲಿ ಆಗುವುದರಿಂದ ತಾಲೂಕಿನ ಅಭಿವೃದ್ಧಿಗೂ ಕಾರಣವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಕ್ರೀಡಾಂಗಣ ಕಬಕ ಪ್ರದೇಶದಲ್ಲಿ ನಿರ್ಮಾಣಕ್ಕೆ ಅವಕಾಶವಾಗಿರುವುದು ನಮ್ಮ ಊರು ಎಂಬ ನೆಲೆಯಲ್ಲೂ ಹೆಮ್ಮೆ ತಂದಿದೆ ಎಂದು ಯುನಿವರ್ಸಿಟಿ ಮಟ್ಟದಲ್ಲಿ ಕ್ರಿಕೆಟ್ ಆಡಿರುವ ಒಂದು ಸಮಯದಲ್ಲಿ ಅತ್ಯುತ್ತಮ ಕ್ರಿಕೆಟ್ ಆಟಗಾರನೂ ಆಗಿದ್ದ ಅಮ್ಜದ್ ಖಾನ್ ಪೋಳ್ಯ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!