ಕರಾವಳಿಕ್ರೀಡೆರಾಜ್ಯ

ಕಬಕದಲ್ಲಿ ಅಂತರ್ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ: ಮುಂದಿನ ಪ್ರಕ್ರಿಯೆಗಳು ಶೀಘ್ರದಲ್ಲೇ ಆರಂಭ-ಮಠಂದೂರು



ಪುತ್ತೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ರಾಜ್ಯ ಸರಕಾರ ಹಸಿರು ನಿಶಾನೆ ತೋರಿದ್ದು, ಇದಕ್ಕೆ ಸಂಬಂಧಿಸಿದ ಮುಂದಿನ ಪ್ರಕ್ರಿಯೆ ಗಳು ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಶೀಘ್ರದಲ್ಲೇ ಬೆಂಗಳೂರಿಗೆ ತೆರಳಿ ಕ್ರೀಡಾ ಸಚಿವರ ಜತೆಮುಂದಿನ ವಿಧಾನಗಳ ಬಗ್ಗೆ ಮಾತುಕತೆ ನಡೆಸುತ್ತೇನೆ ಎಂದು ತಿಳಿಸಿದರು.

ಕ್ರೀಡಾಂಗಣ ಯೋಜನೆ ಅಂಗೀಕಾರಕ್ಕೆ ಶ್ರಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕ್ರೀಡಾ ಸಚಿವ ನಾರಾಯಣ ಗೌಡ, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಕಾನೂನು ಸಚಿವ ಮಾಧುಸ್ವಾಮಿ, ಪುತ್ತೂರಿನ ಯೂನಿಯನ್ ಕ್ರಿಕೆಟರ್ಸ್ ಕಾರ್ಯದರ್ಶಿ ವಿಶ್ವನಾಥ ನಾಯ್ಕ ಅವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆ ಅನು ಷ್ಠಾನಗೊಳಿಸಲಾಗುವುದು ಎಂದು ಶಾಸಕ ಮಠಂದೂರು ಹೇಳಿದರು.

Leave a Reply

Your email address will not be published. Required fields are marked *

error: Content is protected !!