ವಿಟ್ಲ: ಪೆಟ್ರೋಲ್ ಸುರಿದು ಯುವಕನ ಕೊಲೆ: ಆಟೋ ಚಾಲಕ ಬಂಧನ
ವಿಟ್ಲ: ಯುವಕನೋರ್ವನನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು ಪ್ರಕರಣಕ್ಕೆ ಸಂಬಂಧಿಸಿ ಆಟೋ ಚಾಲಕನೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬೊಳಂತರೂ ನಿವಾಸಿ, ಆಟೋ ರಿಕ್ಷಾ ಚಾಲಕ ಅದ್ದು ಯಾನೆ ಅದ್ರಾಮ ಎಂದು ಪೊಲೀಸರು ತಿಳಿಸಿದ್ದಾರೆ.
ಸುರಿಬೈಲ್ ನಿವಾಸಿ, ಸುಮಾರು 19 ವರ್ಷ ಪ್ರಾಯದ ಸಮದ್ ಯಾನೆ ಚಪ್ಪಿ ಎಂಬ ಯುವಕನನ್ನು ಇರಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಕೊಲೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಮೃತದೇಹವನ್ನು ಸುಟ್ಟು ಹಾಕಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ನ.6ರಂದು ನಡೆದಿದ್ದು, ಇಂದು ಬೆಳಗ್ಗೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನನ್ನು ಸ್ಥಳಕ್ಕೆ ಕರೆದುಕೊಂಡು ಬಂದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸಮದ್ ಎರಡು ದಿನಗಳಿಂದ ನಾಪತ್ತೆಯಾಗಿದ್ದು, ಈತ ಆರೋಪಿಯ ಜೊತೆಯಲ್ಲೇ ಇರುತ್ತಿದ್ದ ಎಂದು ತಿಳಿದುಬಂದಿದೆ.