ಕರಾವಳಿ

ವಿಟ್ಲ: ಕೆಲಿಂಜ ಉಳ್ತಾಲ್ತಿ ಕ್ಷೇತ್ರದ ಕಾಣಿಕೆ ಡಬ್ಬಿ ಕಳವು

ವಿಟ್ಲ: ಕಾರಣಿಕ ಕ್ಷೇತ್ರಗಳಲ್ಲೊಂದಾದ ವೀರಕಂಬ ಗ್ರಾಮದ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ, ವಿಟ್ಲ- ಕಲ್ಲಡ್ಕ ರಸ್ತೆ ಬದಿಯಲ್ಲಿರುವ ಕಾಣಿಕೆ ಡಬ್ಬಿ ಕಳವು ಆಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ವಿಟ್ಲ- ಕಲ್ಲಡ್ಕ ಈ ಮಾರ್ಗದಿಂದ ಹಾದು ಹೋಗುವ ಅನೇಕ ಭಕ್ತರು ಕ್ಷೇತ್ರದ ಎದುರು ತಮ್ಮ ವಾಹನವನ್ನು ನಿಲ್ಲಿಸಿ ಕಾಣಿಕೆ ಹಾಕಿ ಹೋಗುತ್ತಾರೆ. ನಿನ್ನೆ ರಾತ್ರಿ ಯಾರೋ ಖದೀಮರು ಕಾಣಿಕೆ ಹುಂಡಿಯನ್ನು ಎಗರಿಸಿರುತ್ತಾರೆ. ಈ ಬಗ್ಗೆ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!