ರಾಜಕೀಯ

ಗುಜರಾತ್ ವಿಧಾನಸಭಾ ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ



ಹೊಸದಿಲ್ಲಿ: ಈ ವರ್ಷ ಡಿಸೆಂಬರ್‌ನಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.

100 ಹೆಸರುಗಳನ್ನೊಳಗೊಂಡ ಪಟ್ಟಿಯನ್ನು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಪ್ರಕಟಿಸಿದ್ದಾರೆ.

ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಘಟ್ಲೋಡಿಯಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಮಜುರಾ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರವಾಗಿರುವ ಹಾರ್ದಿಕ್ ಪಟೇಲ್ ವಿರಾಮಗಮ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಜಾ ಅವರು ಗುಜರಾತ್ ವಿಧಾನಸಭಾ ಚುನಾವಣೆಗೆ ಜಾಮ್‌ನಗರ ಉತ್ತರದಿಂದ ಬಿಜೆಪಿ ಟಿಕೆಟ್ ಪಡೆದಿದ್ದಾರೆ

Leave a Reply

Your email address will not be published. Required fields are marked *

error: Content is protected !!