ಕರಾವಳಿ

ಪತ್ರಕರ್ತ ಸಂಶೀರ್ ಬುಡೋಳಿಯವರಿಗೆ ‘ಜನಪ್ರಿಯ’ ಪುರಸ್ಕಾರ



ವಿಟ್ಲ: ಮಕ್ಕಳನ್ನು ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಾಗಲಳು ಅವರಿಗೆ ತನ್ನ ಪ್ರಾಯದಲ್ಲೇ ನಾಡು-ನುಡಿ ಸಂಸ್ಕೃತಿಯ ಬಗ್ಗೆ ತಿಳುವಳಿಕೆ ಮೂಡಿಸಬೇಕು. ಅಂತಹ ಕಾರ್ಯಕ್ರಮಗಳನ್ನು ಶೈಕ್ಷಣಿಕ ಸಂಸ್ಥೆಗಳು ಆಯೋಜಿಸಬೇಕು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯ, 11 ನೇ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ನಿಕಟಪೂರ್ವ ಸಮ್ಮೇಳನಾಧ್ಯಕ್ಷ, ಪತ್ರಕರ್ತ ಶಂಶೀರ್ ಬುಡೋಳಿ ಹೇಳಿದರು.

ಅವರು ವಿಟ್ಲ ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ನಡೆದ ‘ಕನ್ನಡ ಡಿಂಡಿಮ’ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಆಡಳಿತ ಅಧಿಕಾರಿ ಸಫ್ವಾನ್ ಪಿಲಿಕಲ್ ಸಂದೇಶ ಭಾಷಣ ಮಾಡಿದರು.

ಇದೇ ವೇಳೆ ಮಾಧ್ಯಮ ಕ್ಷೇತ್ರ, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದನ್ನು ಗುರುತಿಸಿ ಶಂಶೀರ್ ಬುಡೋಳಿ ಅವರನ್ನು ಗಣ್ಯರ ಸಮ್ಮುಖದಲ್ಲಿ ‘ಜನಪ್ರಿಯ’ ಪುರಸ್ಕಾರ ಮಾಡುವ ಮೂಲಕ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ಆಡಳಿತ ಮಂಡಳಿಯ ನಿರ್ದೇಶಕ ನೌಶೀನ್ ಬದ್ರಿಯಾ, ಪ್ರಾಂಶುಪಾಲೆ ಪ್ರಿಯಾ ದುರೈರಾಜ್ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಫೀಸಾ ಸ್ವನೀಹ ಸ್ವಾಗತಿಸಿದರು. ಶಝ್ನ ವಂದಿಸಿದರು. ಹಿಬಾ ಮರಿಯಂ ಮತ್ತು ಝುಲ್ಫಾ ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *

error: Content is protected !!