ರಾಜ್ಯ

ಹಾಲಿನ ಟ್ಯಾಂಕರ್ ಢಿಕ್ಕಿಯಾಗಿ ಕಾರಿನಲ್ಲಿದ್ದ ಬೆಂಗಳೂರಿನ ಮೂವರು ದುರ್ಮರಣ

ಬೆಂಗಳೂರು: ಹಾಲಿನ ಟ್ಯಾಂಕರ್ ಢಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಬಳಿಯ ಬೆಂಗಳೂರು-ಪೂತಲಪಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬೆಂಗಳೂರಿನ ಬಸವಣ್ಣನಗರದ ಅಶೋಕ್ ಬಾಬು(31), 28 ವರ್ಷದ ಪತ್ನಿ, 2 ವರ್ಷದ ಮಗು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೂವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಪೂತಲಪಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿಹಾಲಿನ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಈ ಅವಘಢ ಸಂಭವಿಸಿದೆನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!