ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ಳಾರೆಯ ಮತ್ತೋರ್ವನ ಬಂಧನ

ಪುತ್ತೂರು: ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಬಂಧಿಸಿದೆ.
ನ.12ರಂದು ಕಾರ್ಯಾಚರಣೆ ನಡೆಸಿದ ಎನ್‌ಐಎ ತಂಡ, ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಬಂಧಿತನಾಗಿರುವ ಎಸ್‌ಡಿಪಿಐ ಮುಖಂಡ ಶಾಫಿ ಬೆಳ್ಳಾರೆ ಅವರ ಬಾವ ಸಾಹಿದ್ ಬೆಳ್ಳಾರೆ ಎಂಬವರನ್ನು ಬಂಧಿಸಿ ವಿಚಾರಣೆಗೊಳಪಡಿಸಿರುವುದಾಗಿ ತಿಳಿದು ಬಂದಿದೆ. ಸಾಹಿದ್ ಬೆಳ್ಳಾರೆ ಬಂಧನದೊಂದಿಗೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 14 ಮಂದಿ ಆರೋಪಿಗಳ ಬಂಧನವಾದಂತಾಗಿದೆ.