ಪುತ್ತೂರು: ಬೈಕ್-ಸ್ಕೂಟರ್ ಡಿಕ್ಕಿ: ಸ್ಕೂಟರ್ ಸವಾರ ಮೃತ್ಯು
ಪುತ್ತೂರು: ದರ್ಬೆ ಬೈಪಾಸಿನಲ್ಲಿ ಬೈಕ್ ಮತ್ತು ಸ್ಕೂಟರ್ ನಡುವೆ ನ.13ರಂದು ಬೆಳಿಗ್ಗೆ ಅಪಘಾತ ಸಂಭವಿಸಿದ್ದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ವರದಿಯಾಗಿದೆ.

ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಕಟ್ಟಡದಲ್ಲಿರುವ ರೆಡ್ ಕ್ಲಬ್ ಸಂಸ್ಥೆಯ ಸಿಬ್ಬಂದಿ ಸಂಪ್ಯ ನಿವಾಸಿ ನೌಷದ್ ಮೃತಪಟ್ಟವರು ಎಂದು ತಿಳಿದು ಬಂದಿದೆ
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣೆಯ ಎಸ್ ಐ ರಾಮ ನಾಯ್ಕ ಮತ್ತು ಸಿಬ್ಬಂಧಿಗಳು ಬೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.