ಬೆಂಗಳೂರು ರಸ್ತೆ ಗುಂಡಿಗೆ ಇನ್ನೊಬ್ಬರು ಬಲಿ
ಬೆಂಗಳೂರು: ಮಲ್ಲೇಶ್ವರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಹದಗೆಟ್ಟ ರಸ್ತೆಯಿಂದಾಗಿ ಸೋಮವಾರ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ಕುಮಾರ್ ಎಂಬುವವರು ಮೃತಪಟ್ಟಿದ್ದಾರೆ.
ಮಾರಪ್ಪನಪಾಳ್ಯ ನಿವಾಸಿ ಕುಮಾರ್ ಪ್ಲಂಬರ್ ಕೆಲಸ ಮಾಡುತ್ತಿದ್ದರು. ರಾಜಾಜಿನಗರದ ಡಾ. ರಾಜ್‌ಕುಮಾರ್ ರಸ್ತೆಗೆ ಹೊಂದಿಕೊಂಡಿರುವ ಅಡ್ಡರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ದ್ವಿಚಕ್ರ ವಾಹನದಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ.
‘ಕಾಮಗಾರಿಗಾಗಿ ಅಗೆದಿದ್ದ ರಸ್ತೆಯನ್ನು ಅವೈಜ್ಞಾನಿಕವಾಗಿ ಮುಚ್ಚಲಾಗಿದೆ. ಇದರಿಂದಾಗಿ ಇಡೀ ರಸ್ತೆ ಹದಗೆಟ್ಟಿದ್ದು, ಗುಂಡಿಗಳೇ ಹೆಚ್ಚಿವೆ. ರಸ್ತೆಯ ಎರಡೂ ಬದಿಗಳಲ್ಲಿ ನೀರು ನಿಂತು, ತಗ್ಗುಗಳು ಬಿದ್ದಿವೆ. ಇಂಥ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ಕುಮಾರ್, ಟ್ರ್ಯಾಕ್ಟರ್ ಹಿಂದಿಕ್ಕಲು ಯತ್ನಿಸಿದ್ದರು. ರಸ್ತೆಯ ಬದಿಯಲ್ಲಿದ್ದ ತಗ್ಗುಗಳಿಂದಾಗಿ ದ್ವಿಚಕ್ರ ವಾಹನ ಉರುಳಿಬಿದ್ದಿತ್ತು’ ಎನ್ನಲಾಗಿದೆ.
‘ದ್ವಿಚಕ್ರ ವಾಹನ ಸಮೇತ ರಸ್ತೆಯಲ್ಲಿ ಬಿದ್ದಿದ್ದ ಕುಮಾರ್ ಅವರಿಗೆ ಟ್ರ್ಯಾಕ್ಟರ್‌ನ ಟ್ರ್ಯಾಲಿ ಬಡಿದಿತ್ತು. ಇದರಿಂದಾಗಿ ತೀವ್ರ ಗಾಯಗೊಂಡು ಕುಮಾರ್ ಮೃತಪಟ್ಟಿದ್ದಾರೆ.