ಮೇನಾಲ, ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಮಕ್ಕಳ ದಿನಾಚರಣೆ .
ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಮಕ್ಕಳ ದಿನಾಚರಣೆಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳು ಪ್ರಾರ್ಥನೆಯನ್ನು ಹಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು ಮತ್ತು ಸಂಸ್ಥೆಯ ವಿದ್ಯಾರ್ಥಿಗಳಿಂದ ಮಕ್ಕಳ ದಿನಾಚರಣೆಯ ಕುರಿತು ಭಾಷಣ ಹಾಗೂ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.
ಸಂಸ್ಥೆಯ ಆಡಳಿತಾಧಿಕಾರಿ ಜಾಫರ್ ಸಾಧಿಕ್, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.
ಶಿಕ್ಷಕಿ ಶಫ್ರೀನಾ ಸ್ವಾಗತಿಸಿ,
ಶಿಕ್ಷಕಿ ಶಿಫಾನತ್ ವಂದಿಸಿದರು.
ಶಿಕ್ಷಕಿ ಶೈಖ್ ಝಹೀರಾ ಬಾನು ಕಾರ್ಯಕ್ರಮವನ್ನು ನಿರೂಪಿಸಿದರು.
ಶಿಕ್ಷಕೇತರ ವೃಂದದವರು ಸಹಕರಿಸಿದರು.