ಬೆಳ್ತಂಗಡಿ: ವಿಷ ಸೇವಿಸಿ ಅಸ್ವಸ್ಥರಾಗಿದ್ದ ಮಸೀದಿಯ ಮಾಜಿ ಅಧ್ಯಕ್ಷ ನಿಧನ
ಬೆಳ್ತಂಗಡಿ: ವಿಷ ಸೇವಿಸಿದ್ದ ಕಿಲ್ಲೂರು ಮಸ್ಜಿದ್ ಮಾಜಿ ಅಧ್ಯಕ್ಷ ಬಿ.ಹೆಚ್ ಅಬ್ದುಲ್ ಹಮೀದ್ (64) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ನ.5 ರಂದು ಸಂಜೆ ನೇತ್ರಾವತಿ ನದಿ ಕಿನಾರೆಯ ಅಲಂಜಿಕಟ್ಟ ಎಂಬಲ್ಲಿ ವಿಷ ಸೇವಿಸಿ ಅಸ್ವಸ್ಥರಾಗಿ ಬಿದ್ದಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ವಿಪರೀತ ಸಾಲ ಬಾಧೆಯಿಂದ ಮನ ನೊಂದು ವಿಷ ಸೇವಿಸಿದ್ದರು ಎನ್ನಲಾಗಿದ್ದು ಸ್ಪಷ್ಟ ಮಾಹಿತಿ ಲಭ್ಯ ಆಗಿಲ್ಲ.