ಹೆಂಡತಿಯ ಹಣದ ದಾಹಕ್ಕೆ ಪತಿ ಆತ್ಮಹತ್ಯೆ..!?ನನ್ನ ಸಾವಿಗೆ ಹೆಂಡತಿ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ
ಹೆಂಡತಿಯ ಹಣದ ದಾಹ ನೀಗಿಸಲಾಗದೇ ಪತಿ ಆತ್ಮಹತ್ಯೆ ಮಾಡಿಕೊಂಡ ವಿಲಕ್ಷಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮಂಡ್ಯದ ನಾಗಮಂಗಲ ಮೂಲದ ಅಣ್ಣಯ್ಯ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಬಾರ್ ಒಂದರಲ್ಲಿ ಕ್ಯಾಶಿಯರ್ ಆಗಿರುವ ಅಣ್ಣಯ್ಯ ಐದು ವರ್ಷದ ಹಿಂದೆ ಉಮಾ ಎಂಬಾಕೆಯ ಜತೆ ಮದುವೆಯಾಗಿತ್ತು. ಮದುವೆ ಬಳಿಕ ಹಣದ ವಿಚಾರಕ್ಕೆ ಸಂಬಂಧಿಸಿ ಗಂಡ ಹೆಂಡತಿ ಮಧ್ಯೆ ಯಾವಾಗಲೂ ಜಗಳ ಆಗುತ್ತಿತ್ತು. ನಾನು ಎಷ್ಟು ದುಡಿದರೂ ಸಾಕಾಗುವುದಿಲ್ಲ ಹೆಂಡತಿ ದುಡ್ಡು-ದುಡ್ಡು ಎನ್ನುತ್ತಾಳೆ. ಜೀವನದಲ್ಲಿ ನೆಮ್ಮದಿಯೇ ಇಲ್ಲದಂತೆ ಆಗಿದೆ. ನನ್ನ ಸಾವಿಗೆ ಹೆಂಡತಿ ಕಾರಣ ಎಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ.