ರಾಷ್ಟ್ರೀಯ

1.77 ಕೋಟಿಗೆ ಸೇಲ್ ಆಯ್ತು 1970ರ ದಶಕದ ಸ್ಟೀವ್ ಜಾಬ್ಸ್ ಚಪ್ಪಲಿ..!



ವಾಷಿಂಗ್ಟನ್: ಆಪಲ್ ಕಂಪನಿಯ ಸಹ-ಸಂಸ್ಥಾಪಕ (Apple co-founder) ಸ್ಟೀವ್ ಜಾಬ್ಸ್ (Steve Jobs) ಅವರು ಧರಿಸುತ್ತಿದ್ದ ಕಂದು ಬಣ್ಣದ ಲೆದರ್ ಚಪ್ಪಲಿ 1.77 ಕೋಟಿಗೆ ($218,750) ಮಾರಾಟವಾಗಿದೆ ಎಂದು ಹರಾಜು (Auctions) ಕಂಪನಿ ಜೂಲಿಯನ್ಸ್ (Julien’s) ತಿಳಿಸಿದೆ.

ನವೆಂಬರ್ 11 ರಿಂದ ನೇರ ಪ್ರಸಾರವಾದ ಹರಾಜು ಪ್ರಕ್ರಿಯೆ ನವೆಂಬರ್ 13ಕ್ಕೆ ಮುಕ್ತಾಯವಾಯಿತು. ಒಂದು ಜೊತೆ ಕಂದು ಬಣ್ಣದ (Brown Suede) ಸ್ಯೂಡ್ ಲೆದರ್ ಬರ್ಕೆನ್‍ಸ್ಟಾಕ್ ಅರಿಜೋನಾ ಚಪ್ಪಲಿಯನ್ನು (Leather Birkenstock Arizona sandals) ಸ್ಟೀವ್ ಜಾಬ್ಸ್ ಅವರು ಧರಿಸುತ್ತಿದ್ದರು. 1970ರ ಮತ್ತು 1980ರ ದಶಕದಲ್ಲಿ ಸ್ಟೀವ್ ಜಾಬ್ಸ್ ಈ ಚಪ್ಪಲಿಯನ್ನು ಧರಿಸುತ್ತಿದ್ದರು. ಈ ಒಂದು ಜೊತೆ ಚಪ್ಪಲಿ, ಹಿಂದೆ ಸ್ಟೀವ್ ಜಾಬ್ಸ್ ಅವರ ಮನೆ ನಿರ್ವಾಹಕ ಆಗಿದ್ದ ಮಾರ್ಕ್ ಶೆಫ್ ಅವರ ಬಳಿ ಇತ್ತು.

ಹರಾಜು ಮನೆಯ ವೆಬ್‍ಸೈಟ್‍ನಲ್ಲಿನ ವಿವರಗಳ ಪ್ರಕಾರ, ಆಪಲ್ ಕಂಪನಿಯ ಇತಿಹಾಸದಲ್ಲಿ ಅನೇಕ ಪ್ರಮುಖ ಕ್ಷಣಗಳಲ್ಲಿ ಸ್ಟೀವ್ ಜಾಬ್ಸ್ ಈ ಚಪ್ಪಲಿಗಳನ್ನು ಧರಿಸಿದ್ದರು. 1976ರಲ್ಲಿ ಲಾಸ್ ಆಲ್ಟೋಸ್ ಗ್ಯಾರೇಜ್‍ನಲ್ಲಿ ಆಪಲ್ ಕಂಪ್ಯೂಟರ್ ಅನ್ನು ಆನ್ ಮಾಡುವ ಸಂದರ್ಭದಲ್ಲಿ ಸ್ಟೀವ್ ಜಾಬ್ಸ್ ಇದೇ ಚಪ್ಪಲಿಯನ್ನು ಧರಿಸಿದ್ದರು. ಜಾಬ್ಸ್ ಬಿರ್ಕೆನ್‍ಸ್ಟಾಕ್ಸ್‌ನ ಜಾಣ್ಮೆ ಮತ್ತು ಪ್ರಾಯೋಗಿಕತೆಯನ್ನು ಕಂಡು ಜನ ಬೆರಗಾಗಿದ್ದರು

Leave a Reply

Your email address will not be published. Required fields are marked *

error: Content is protected !!