ಬಂಟ್ವಾಳ: ಬೈಕ್ ಸ್ಕಿಡ್ ಆಗಿ ತಲೆಗೆ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು
ಬಂಟ್ವಾಳ: ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ.

ಬ್ರಹ್ಮರಕೂಟ್ಲು ಕಳ್ಳಿಗೆ ನಿವಾಸಿ ಮುಝಮ್ಮಿಲ್ ಮೃತ ಯುವಕ.
ನ. 9ರಂದು ರಾತ್ರಿ ವೇಳೆ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿತ್ತು.
ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.