ಜಿಲ್ಲೆ

ದೇಶದ್ರೋಹಿ ಸಂಘಟನೆಗಳನ್ನು ಬ್ಯಾನ್ ಮಾಡಿದ್ರು ಬಾಲ ಬಿಚ್ಚಲು ಹೊರಟಿದ್ದಾರೆ: ನಳಿನ್ ಕುಮಾರ್ ಕಟೀಲ್



ಮಂಗಳೂರು: “ಮಂಗಳೂರಿನಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಯಾವುದೇ ಭಯೋತ್ಪಾದಕ ಕೃತ್ಯ ನಡೆಸಲು ಪ್ರಯತ್ನಿಸುವವರ ಜನ್ಮ ಜಾಲಾಡಿ ಶಾಶ್ವತವಾಗಿ ಅವರು ನೆನಪಿಡುವ ಕ್ರಮ ಜರುಗಿಸಲಾಗುವುದು” ಎಂದು ಬಿಜೆಪಿ ರಾಜ್ಯಾಧ್ಯಾಕ್ಷ ನಳಿನ್ ಕುಮಾರ್ ಹೇಳಿದ್ದಾರೆ.

ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ ಅವರು, “ದೇಶದ್ರೋಹಿ ಸಂಘಟನೆಗಳನ್ನು ಬ್ಯಾನ್ ಮಾಡಿದ ಬಳಿಕ ವಿಧ್ವಂಸಕ ಕೃತ್ಯಗಳನ್ನು ಮಾಡಿ ಬಾಲ ಬಿಚ್ಚಲು ಕೆಲವರು ಹೊರಟಿದ್ದಾರೆ. ಭಯೋತ್ಪಾದನೆಯ ವಿರುದ್ಧದ ನಮ್ಮ ಸಮರದಲ್ಲಿ ನಾಗರಿಕರ ಸಹಕಾರ ಮುಖ್ಯ. ಕರ್ನಾಟಕದಲ್ಲಿ ನಮ್ಮ ಪೊಲೀಸ್ ಇಲಾಖೆ ಮಂಗಳೂರಿನ ಸ್ಫೋಟದ ಮೂಲ ಪತ್ತೆಹಚ್ಚುವಲ್ಲಿ ನಿರತವಾಗಿದ್ದು, ಕೇಂದ್ರದಿಂದ ಅಗತ್ಯ ನೆರವು ನೀಡಲಾಗಿದೆ” ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಭಯೋತ್ಪಾದಕ ಕೃತ್ಯ ನಡೆಸಲು ಪ್ರಯತ್ನಿಸುವವರ ಜನ್ಮ ಜಾಲಾಡಿ ಶಾಶ್ವತವಾಗಿ ಅವರು ನೆನಪಿಡುವ ಕ್ರಮ ಜರುಗಿಸಲಾಗುವುದು. ಕರ್ನಾಟಕದಲ್ಲಿ ಭಯೋತ್ಪಾದಕ ಕೃತ್ಯ ಮಾಡುವ ಮೂಲಕ ರಾಜ್ಯಕ್ಕೆ ಕೆಟ್ಟ ಹೆಸರು ತರುವ ಮತಾಂಧರ ಪ್ರಯತ್ನ ಜಾರಿಯಾಗಲು ಬಿಡುವುದಿಲ್ಲ. ಕೇಂದ್ರ ಸರಕಾರದ ಸೂಚನೆ ಮೇರೆಗೆ ರಾಷ್ಟ್ರೀಯ ತನಿಖಾ ದಳ (NIA) ಮಂಗಳೂರಿನ ಬಾಂಬ್ ಸ್ಫೋಟದ ತನಿಖೆ ನಡೆಸಲಿದ್ದು, ಇದರ ಹಿಂದಿರುವ ಮೂಲಭೂತವಾದಿಗಳ ಜಾಡನ್ನು ಪತ್ತೆಹಚ್ಚಲು ನೆರವಾಗಲಿದೆ” ಎಂದು ಟ್ವೀಟಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!