ಮಂಗಳೂರು ಆಟೋ ಸ್ಫೋಟ ಪ್ರಕರಣಕ್ಕೂ ಪ್ರೇಮರಾಜ್ ಗೂ ಯಾವುದೇ ಸಂಬಂಧವಿಲ್ಲ: ಡಿಜಿಪಿ ಪ್ರವೀಣ್ ಸೂದ್
ಮಂಗಳೂರು: ಮಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮರಾಜ್ ಗೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಡಿಜಿಪಿ ಪ್ರವೀಣ್ ಸೂದ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರೇಮರಾಜ್ ದಾಖಲೆಗಳು ಕಳವಾಗಿದ್ದವು. ಅವರಿಗೂ ಈ ಸ್ಫೋಟ ಪ್ರಕರಣಕ್ಕೂ ಸಂಬಂಧ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೊದಲ್ಲಿ ಸಂಭವಿಸಿದ ಸ್ಥಳದಲ್ಲಿ ಪ್ರೇಮ್‌ರಾಜ್ ಹುಟಗಿ ಎಂಬ ಹೆಸರಲ್ಲಿದ್ದ ಆಧಾರ್ ಕಾರ್ಡ್ ಪತ್ತೆಯಾಗಿತ್ತು ಎಂದು ಕೆಲವು ಮಾಧ್ಯಮಗಳು ವರದಿ ಬಿತ್ತಿರಿಸಿದ್ದವು.