ರಾಜ್ಯ

ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಮೃತದೇಹ ನೋಡಲು ಬಂದ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರನ್ನು ಅಟ್ಟಾಡಿಸಿ ಹಲ್ಲೆ



ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಕುಂದೂರು ಸಮೀಪದ ಹುಲ್ಲೆಮನೆ ಗ್ರಾಮದ ಶೋಭಾ ಎಂಬವರು ಕಾಡಾನೆ ದಾಳಿಯಿಂದ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದು, ಮೃತದೇಹ ನೋಡಲು ತಡವಾಗಿ ಬಂದ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರನ್ನು ಅಟ್ಟಾಡಿಸಿ ಹಲ್ಲೆ ಮಾಡಿರುವುದಲ್ಲದೇ ಬಟ್ಟೆಯನ್ನು ಹರಿದಿರುವ ಘಟನೆ ಭಾನುವಾರ ಸಂಜೆ ವರದಿಯಾಗಿದೆ .

ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದಾಗಿ ಶೋಭಾ ಮೃತಪಟ್ಟಿದ್ದರು. ಘಟನೆ ಬೆಳಗ್ಗೆ ನಡೆದಿದ್ದರೂ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ಸಂಜೆ ವೇಳೆ ಗ್ರಾಮಕ್ಕೆ ತೆರಳಿ ಮೃತದೇಹ ವೀಕ್ಷಿಸಲು ಮುಂದಾಗಿದ್ದರು ಎನ್ನಲಾಗಿದೆ.


ಈ ವೇಳೆ ಗ್ರಾಮಸ್ಥರು ಆಕ್ರೋಶಗೊಂಡು ಶಾಸಕ ಕುಮಾರಸ್ವಾಮಿ ಅವರಿಗೆ ಘೇರಾವ್ ಹಾಕಿದಲ್ಲದೆ. ಗ್ರಾಮದ ಮುಖ್ಯರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಬಂದಿದ್ದಾರೆ. ತೀವ್ರ ಅಕ್ರೋಶಗೊಂಡಿದ್ದ ಕೆಲ ಗ್ರಾಮಸ್ಥರು ಅವಾಚ್ಯ ಶಬ್ಧಗಳಿಂದ ನಿಂದಿಸಿದಲ್ಲದೆ. ಶಾಸಕರ ಬಟ್ಟೆ ಹಿಡಿದು ಹರಿದಿದ್ದಾರೆ. ಈ ವೇಳೆ ಶಾಸಕರು ಧರಿಸಿದ ಬಟ್ಟೆ ಹರಿದಿದೆ.

ಈ ವೇಳೆ ಉದ್ರಿಕ್ತಗೊಂಡ ಗ್ರಾಮಸ್ಥರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದು, ಪರಿಸ್ಥಿತಿ ಕೈ ಮೀರಿದ ವೇಳೆ ಲಾಠಿ ಪ್ರಹಾರ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!