ಮಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ
ಮಂಗಳೂರು: ನಾಗುರಿಯಲ್ಲಿ ರಿಕ್ಷಾದಲ್ಲಿ ನಡೆದ ಉಗ್ರ ಕೃತ್ಯ ಆತಂಕ ಮೂಡಿಸಿರುವ ಬೆನ್ನಲ್ಲೇ ನಗರದ ಬಿಜೈನಲ್ಲಿರುವ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಸೋಮವಾರ ಅನುಮಾನಾಸ್ಪದ ಬ್ಯಾಗ್ ವೊಂದು ಪತ್ತೆಯಾಗಿ ಆತಂಕಕ್ಕೆ ಕಾರಣವಾದ ಘಟನೆ ನಡೆದಿದೆ.

ಬ್ಯಾಗ್ ವಿಚಾರ ತಿಳಿದ ತತ್ ಕ್ಷಣ ಬಾಂಬ್ ನಿಷ್ಕ್ರಿಯ ದಳ ,ಶ್ವಾನದಳ ದೌಡಾಯಿಸಿ ಪರಿಶೀಲನೆ ನಡೆಸಿತು. ಪರಿಶೀಲನೆ ಬಳಿಕ ಬ್ಯಾಗ್ ವಾರಿಸುದಾರ ಪತ್ತೆಯಾಗಿದ್ದು, ಪ್ರಯಾಣಿಕನ ಬ್ಯಾಗ್ ಎಂದು ತಿಳಿದು ನಿರಾಳವಾಯಿತು.
ನಾಗುರಿಯ ಘಟನೆಯ ಬಳಿಕ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತಿದ್ದು, ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.