ಬೆಳ್ತಂಗಡಿ: ಸಂಶಯಾಸ್ಪದ ರೀತಿಯಲ್ಲಿ ಮನೆಯ ಅಂಗಳದಲ್ಲಿ ಇಬ್ಬರ ಮೃತದೇಹ ಪತ್ತೆ..!
ಬೆಳ್ತಂಗಡಿ: ತಾಲೂಕಿನ ಪುದುವೆಟ್ಟು, ಪಲ್ಲದಪಲ್ಕೆ ಎಂಬಲ್ಲಿ ಮನೆ ಅಂಗಳದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಸಾವನ್ನಪ್ಪಿದವರು ತಂದೆ ಹಾಗೂ ಮಗ ಎಂದು ತಿಳಿದು ಬಂದಿದ್ದು, ಹೆಸರು ತಿಳಿದು ಬಂದಿಲ್ಲ. ಇದು ಕೊಲೆಯೋ ಅಥವ ಇನ್ನೇನಾದರೂ ಬೇರೆ ಘಟನೆಗಳು ನಡೆದಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ. ವಿಷಕಾರಿ ಅಣಬೆ ತಿಂದು ಸಾವನ್ನಪ್ಪಿರುವ ಬಗ್ಗೆ ಸಂಶಯ ಉಂಟಾಗಿದೆ.
ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಪಷ್ಟ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.