ಕರಾವಳಿ

ಸುಳ್ಯ: ಹೆರಿಗೆಯಾಗಿ 12ನೇ ದಿನ ಬಾಣಂತಿ ಮೃತ್ಯು



ಹೆರಿಗೆಯಾದ 12ನೇ ದಿನಕ್ಕೆ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯ ಜಟ್ಟಿಪಳ್ಳ ಸಮೀಪ ನ. 20 ರಂದು ನಡೆದಿದೆ.

ಜಟ್ಟಿಪಳ್ಳದ ನಿವಾಸಿ ಲೀಲಾ ಎಂಬವರ ಪುತ್ರಿ ಗೀತಾ (30) ಸಾವನ್ನಪ್ಪಿದ ಬಾಣಂತಿ ಮಹಿಳೆ. ಇವರನ್ನು ಚೊಕ್ಕಾಡಿಯ ಜಗದೀಶ ಎಂಬವರಿಗೆ ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ ಒಂದು ಗಂಡು ಮಗುವಿದ್ದು, ಎರಡನೇ ಮಗುವಿನ ಹೆರಿಗೆಗಾಗಿ ಅವರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.


12 ದಿನಗಳ ಹಿಂದೆ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ಅವರು ಮಗು ಸಮೇತ ತಾಯಿ ಮನೆಗೆ ಬಂದಿದ್ದರು. ನ. 20 ರಂದು ಬೆಳಿಗ್ಗೆ ತೀವ್ರ ಅನಾರೋಗ್ಯಕ್ಕೆ ಒಳಗಾದ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ರಾತ್ರಿ 8.30 ರ ವೇಳೆಗೆ ಅವರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!