ಸಂಪಾಜೆ ಗ್ರಾ. ಪಂ. ಸದಸ್ಯ ಸೋಮಶೇಖರ್ ಕೊಯಿಂಗಾಜೆ ರಾಜೀನಾಮೆ
ಸಂಪಾಜೆ ಗ್ರಾಮ ಪಂಚಾಯತ್ ನ ಸದಸ್ಯ ಸೋಮಶೇಖರ್ ಕೊಯಿಂಗಾಜೆಯವರು ಪಂಚಾಯತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ ರಾಗಿರುವ ಸೋಮಶೇಖರ ಕೊಯಿಂಗಾಜೆಯವರು ಕಳೆದ 25 ವರ್ಷಗಳಿಂದ ದ ಕ ಸಂಪಾಜೆ ವಲಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ , ಪ್ರಸ್ತುತ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕಳೆದ 25 ವರ್ಷಗಳಿಂದ ಸಂಪಾಜೆ ಗ್ರಾಮ ಪಂಚಾಯತ್ ಕಾಂಗ್ರೆಸ್ಸಿನ ಭದ್ರಕೋಟೆಯಾಗಿತ್ತು.
ಇದೀಗ ಕಳೆದ ಒಂದು ವರ್ಷದಿಂದ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಪಕ್ಷದಲ್ಲಿ ಮೂಡಿ ಬಂದಿರುವ ಬಿನ್ನಮತ ಇಂದು ಕಾಂಗ್ರೆಸ್ ಪಕ್ಷದ ಮುಖಂಡರೋರ್ವರು ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವಲ್ಲಿಗೆ ಬಂದು ತಲುಪಿದೆ.
ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಅಧ್ಯಕ್ಷ ಗಾದಿಗಾಗಿ ಎರಡುವರೆ ವರ್ಷ ಪ್ರಸ್ತುತ ಅಧ್ಯಕ್ಷರಾಗಿರುವ ಜಿಕೆ ಹಮೀದ್, ಮುಂದಿನ ಎರಡುವರೆ ವರ್ಷ ಪಕ್ಷ ಸೂಚಿಸುವವರನ್ನು ಅಧ್ಯಕ್ಷರನ್ನಾಗಿ ಮಾಡುವ ಮಾತುಕತೆ ನಡೆದಿತ್ತು ಎನ್ನಲಾಗಿದೆ. ಆದರೆ ಇದೀಗ ತನ್ನ ಅವಧಿ ಕಳೆದಿದ್ದರು ಜಿಕೆ ಹಮೀದ್ ತನ್ನ ಸ್ಥಾನವನ್ನು ಬಿಟ್ಟುಕೊಡಲು ಸಿದ್ದರಿಲ್ಲ ಎಂಬ ವಿಷಯ ಇಷ್ಟೆಲ್ಲ ಘಟನೆಗೆ ಕಾರಣ ಎಂದು ಸಾರ್ವಜನಿಕ ವಲಯದಲ್ಲಿ ಕೇಳು ಬರುತ್ತಿದೆ.
ಈ ವಿಷಯದ ಬಗ್ಗೆ ಕಾಂಗ್ರೆಸ್ ಪಕ್ಷದ ಜಿಲ್ಲಾ ಮುಖಂಡರು ತಾಲೂಕು ಮಟ್ಟದ ಮುಖಂಡರ ನಡುವೆ ಹಲವಾರು ಬಾರಿ ಸಂಧಾನ ಸಭೆ ನಡೆದರು ಇದನ್ನು ಹಮೀದ್ ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ.
ಆದ್ದರಿಂದ ಕಾಂಗ್ರೆಸ್ ಪಕ್ಷದಿಂದ ಹಮೀದ್ ರವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸುವ ಕಾರ್ಯವು ನಡೆದಿದೆ.
ಇದನ್ನು ಯಾವುದನ್ನು ಲೆಕ್ಕಿಸದ ಹಮೀದ್ ತಮ್ಮ ಅಧ್ಯಕ್ಷ ಸ್ಥಾನದಲ್ಲಿ ಕುಳಿತು ಇಂದಿನವರೆಗೆ ಪಂಚಾಯತ್ ಅಧ್ಯಕ್ಷ ಸ್ಥಾನವನ್ನು ತಮ್ಮ ಸ್ವಾಧೀನದಲ್ಲಿ ಇಟ್ಟುಕೊಂಡಿದ್ದಾರೆ.
ಈ ಎಲ್ಲಾ ಘಟನೆಗಳಿಂದ ಹಿರಿಯ ಕಾಂಗ್ರೆಸ್ ಮುಖಂಡ ಸೋಮಶೇಖರ್ ಕೊಯಿಂಗಜೆ ಅವರು ತಮ್ಮ ರಾಜಿನಾಮೆ ಪತ್ರವನ್ನು ಇಂದು ಪಂಚಾಯತ್ ಅಧ್ಯಕ್ಷ ಜಿ ಕೆ ಹಮೀದ್ ರವರಿಗೆ ಕಳುಹಿಸಿರುತ್ತಾರೆ ಎಂದು ತಿಳಿದುಬಂದಿದೆ.
ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಸೋಮಶೇಖರ್ ರವರು ವೈಯುಕ್ತಿಕ ಕಾರಣಗಳಿಂದ ನಾನು ಪಂಚಾಯತ್ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದು ಯಾವುದೇ ಸಮಸ್ಯೆಯಿಂದ ಅಲ್ಲ ಎಂದು ಹೇಳಿದ್ದಾರೆ. ಕಳೆದ ಮೂರು ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಲು ನನ್ನ ಎಲ್ಲಾ ಆತ್ಮೀಯ ಮಿತ್ರರು ಮತ್ತು ಪಕ್ಷದ ಕಾರ್ಯಕರ್ತರು ತಾಲೂಕು ಮಟ್ಟದ ಮತ್ತು ಜಿಲ್ಲಾಮಟ್ಟದ ರಾಜ್ಯಮಟ್ಟದ ನಾಯಕರುಗಳು ನನಗೆ ಬೆಂಬಲವನ್ನು ನೀಡಿದ್ದಾರೆ. ಅವರೆಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸುತ್ತಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುವ ಕುರಿತು ಸಹಕಾರಿ ಸಂಘದ ಶತಮಾನೋತ್ಸವದ ಬಳಿಕ ತೀರ್ಮಾನ ಕೈಗೊಳ್ಳುವುದಾಗಿ ಅವರು ಹೇಳಿದರು.
ಒಟ್ಟಿನಲ್ಲಿ ಅಧ್ಯಕ್ಷ ಸ್ಥಾನದ ಪ್ರತಿಷ್ಠೆಯಿಂದ ಕಾಂಗ್ರೆಸ್ಸಿನ ಭದ್ರಕೋಟೆ ಚುರಾಗಬಹುದು ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಂಪಾಜೆ ಯ ಮುಂದಿನ ರಾಜಕೀಯ ಸ್ಥಿತಿಯನ್ನು ಕಾದು ನೋಡಬೇಕಾಗಿದೆ.