ಕೆಮ್ಮಾಯಿ ರಸ್ತೆ ಬದಿ ನಿಂತಿದ್ದ ಮಹಿಳೆಗೆ ಕಾರು ಡಿಕ್ಕಿ
ಪುತ್ತೂರು:ರಸ್ತೆ ದಾಟಲು ಬದಿಯಲ್ಲಿ ನಿಂತಿದ್ದ ಮಹಿಳೆಯೊಬ್ಬರಿಗೆ ಕಾರೊಂದು ಡಿಕ್ಕಿಯಾದ ಘಟನೆ ಕೆಮ್ಮಾಯಿ ಸಮೀಪ ನಡೆದಿದೆ.

ಪುತ್ತೂರು ಕಡೆ ಬರುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ, ಕೆಮ್ಮಾಯಿಯಲ್ಲಿ ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ದಾಟಲು ರಸ್ತೆಯ ಎಡಬದಿಯಲ್ಲಿ ನಿಂತಿದ್ದ ಕೆಮ್ಮಿಂಜೆ ನಿವಾಸಿ ಮೈಮುನಾ ಅವರಿಗೆ ಡಿಕ್ಕಿಯಾಗಿದೆ.ಡಿಕ್ಕಿಯ ರಭಸಕ್ಕೆ ಮೈಮುನಾ ಅವರಿಗೆ ತಲೆ, ಕೈಗಳಿಗೆ ಗಾಯವಾಗಿದೆ.ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.