ವಿದ್ಯಾರ್ಥಿನಿಯರಿಗೆ ಕಿರುಕುಳ: ಆರೋಪಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸಾರ್ವಜನಿಕರು
ದಿನ ನಿತ್ಯ ಶಾಲಾ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದನೆನ್ನಲಾದ ಆರೋಪಿ ಕ್ಯಾಬ್ ಚಾಲಕನನ್ನು ಗ್ರಾಮಸ್ಥರು ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಜಿಲ್ಲೆಯ ಸಕ್ಕರಾಯಪಟ್ಟಣ ಸಮೀಪದ ಸಿದ್ದರಹಳ್ಳಿಯಲ್ಲಿ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ .

ಆರೋಪಿಯಾಗಿದ್ದು ಕ್ಯಾಬ್ ಚಾಲಕ ರಾಜಪ್ಪ ಎಂದು ಗುರುತಿಸಲಾಗಿದ್ದು ಈತನನ್ನು ಬಂಧಿಸಿರುವ ಪೊಲೀಸರು ಪೊಕ್ಸೊ ಪ್ರಕರಣ ದಾಖಲಿಸಿದ್ದಾರೆ.
ಕ್ಯಾಬ್ ನಲ್ಲಿ ಕಡೂರಿನಿಂದ ಸಿದ್ದರಹಳ್ಳಿಗೆ ಶಿಕ್ಷಕಿಯರನ್ನ ಕರೆತರುತ್ತಿದ್ದ ಆರೋಪಿ ರಾಜಪ್ಪ, ಬಳಿಕ ಶಾಲೆಯ ಪರಿಸರದಲ್ಲಿ ಉಳಿದುಕೊಂಡು ವಿದ್ಯಾರ್ಥಿನಿಯರ ಶೌಚಾಲಯದ ಬಳಿ ತೆರಳಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.