ಮಂಗಳೂರು: ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ
ಮಂಗಳೂರು: ನಿಲ್ಲಿಸಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ
ಮಂಗಳೂರು ನಗರದ ಬಲ್ಮಠದ ಜ್ಯೂಸ್ ಜಂಕ್ಷನ್ ಬಳಿ ಶನಿವಾರ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಕಾಣಿಸಿಕೊಂಡ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು
ಕಾರಿನ ಎಸಿ ಭಾಗದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಫೋರ್ಡ್ ಕಾರಿನಲ್ಲಿ ಬೆಂಕಿ ಅನಾಹುತ ಉಂಟಾಗಿದೆ.
ಜ್ಯೂಸ್ ಕುಡಿಯಲು ಬಲ್ಮಠದಲ್ಲಿ ಕುಟುಂಬವೊಂದು ಕಾರು ನಿಲ್ಲಿಸಿದ್ದ ವೇಳೆ ಘಟನೆ ನಡೆದಿದೆ.
ಸದ್ಯ ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ ಕಾರಿನ ಮುಂಭಾಗ ಸಂಪೂರ್ಣ ಹಾನಿಯಾಗಿದೆ.