ಯುವತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಗೃಹಿಣಿಯೊಬ್ಬರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರು ನಗರದ ಸುದ್ದಗುಂಟೆ ಪಾಳ್ಯದಲ್ಲಿ ನಡೆದಿದೆ. ಗುರಪ್ಪನ ಪಾಳ್ಯದ ನಿವಾಸಿ ಖತೀಜಾ ಕುಬ್ರ ಎಂಬವರು ಅನುಮಾನಾಸ್ಪದವಾಗಿ ಮೃತಪಟ್ಟವರು.

ಮಗಳನ್ನು ಕೊಂದು ನೇಣು ಹಾಕಿದ್ದಾರೆ ಎಂದು ಖತೀಜಾ ಪೋಷಕರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪತಿ ಮೆಹಬೂಬ್, ಮಾವ ಮತ್ತು ನಾದಿನಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಸುದ್ದಗುಂಟೆ ಪಾಳ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.