ರಾಜಕೀಯರಾಜ್ಯ

ಸೈಲೆಂಟ್ ಸುನೀಲ್’ಗೆ ಬಿಜೆಪಿಯ ಬಾಗಿಲು ಬಂದ್- ನಳಿನ್ ಕುಮಾರ್



ಬೆಂಗಳೂರು: ರೌಡಿಶೀಟರ್ ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಸೈಲೆಂಟ್ ಸುನೀಲ್ ನನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸುವುದಿಲ್ಲ. ಸೈಲೆಂಟ್ ಸುನೀಲ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲ ವಿಚಾರಗಳನ್ನು ಪಕ್ಷದ ಗಮನಕ್ಕೆ ತರಬೇಕು ಎಂದು ಅವರು ಸೂಚಿಸಿದ್ದಾರೆ.


Leave a Reply

Your email address will not be published. Required fields are marked *

error: Content is protected !!