ರಾಜ್ಯದ 10 ಕಡೆಗಳಲ್ಲಿ ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪನೆ ವಿಚಾರ: ಸಿಎಂ ಬೊಮ್ಮಾಯಿ ಹೇಳಿದ್ದೇನು
ಬೆಂಗಳೂರು: ರಾಜ್ಯದ 10 ಕಡೆಗಳಲ್ಲಿ ಪ್ರತ್ಯೇಕ ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪನೆಯ ವಿಷಯ ಸರ್ಕಾರದ ಮಟ್ಟದಲ್ಲಿ ಚರ್ಚೆಯೇ ಆಗಿಲ್ಲ, ಇದು ಸರ್ಕಾರದ ನಿಲುವು ಅಲ್ಲ, ವಕ್ಫ್ ಬೋರ್ಡ್ ಅಧ್ಯಕ್ಷರು ಹೇಳಿರುವುದು, ಅದು ಅವರ ವೈಯಕ್ತಿಕ ಹೇಳಿಕೆಯಷ್ಟೇ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ವಕ್ಫ್ ಬೋರ್ಡ್ ಅಧ್ಯಕ್ಷರು ಹೇಳಿರುವುದು ಅವರ ವೈಯಕ್ತಿಕ ಹೇಳಿಕೆ ಅಷ್ಟೇ. ಸರ್ಕಾರ ಏನು ನಿರ್ಣಯ ತೆಗೆಯುವುದಾದರೂ ಮರುಪರಿಶೀಲಿಸಿ ನಿರ್ಧರಿಸುತ್ತದೆ ಎಂದು ಅವರು ಹೇಳಿಕೆ ನೀಡಿದ್ದಾರೆ.