ಕರಾವಳಿಕ್ರೈಂ

ಸುಳ್ಯ: ಒಂಟಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದು ಪರಾರಿಯಾದ ಆರೋಪಿ ಅರೆಸ್ಟ್

ಸುಳ್ಯ : ಜಾಲ್ಸೂರು ಗ್ರಾಮದ ಬೈತಡ್ಕ ಎಂಬಲ್ಲಿ ವೃದ್ಧ ಮಹಿಳೆಯೊಬ್ಬರು ಒಬ್ಬಂಟಿಯಾಗಿ ಮನೆಯಲ್ಲಿ ಇದ್ದ ಸಂದರ್ಭದಲ್ಲಿ ಅವರ ಕುತ್ತಿಗೆಯಿಂದ ಚಿನ್ನದ ಸರ ಎಳೆದು ಪರಾರಿಯಾದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಸಲೀಂ ಪಿ.ಎ. ಬಂಧಿತ ಆರೋಪಿ.

ನ. 28ರಂದು l ಅಪರಿಚಿತ ವ್ಯಕ್ತಿಯೋರ್ವ ಜಾಲ್ಸೂರು ಗ್ರಾಮದ ಕಮಲ (64) ಎಂಬವರ ಮನೆಗೆ ಹೋಗಿ ನೀರು ಕೇಳುವ ನೆಪದಲ್ಲಿ ಮನೆಯ ಒಳಗೆ ಪ್ರವೇಶಿಸಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವುದಾಗಿ ಅವರು ಸುಳ್ಯ ಪೊಲೀಸರಿಗೆ ದೂರು ನೀಡಿದ್ದರು.

ಈ ಬಗ್ಗೆ ವಿಶೇಷ ತಂಡ ರಚಿಸಿದ ಪೋಲೀಸರು ಕೇರಳದ ದೇಲಂಪಾಡಿ ಗ್ರಾಮದ ಕೊಟ್ಯಾಡಿ ಬಳಿ ಆರೋಪಿ ಸಲೀಂನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಆರೋಪಿಯು ವೃದ್ದ ಮಹಿಳೆಯ ಕುತ್ತಿಗೆಯಿಂದ ಕಿತ್ತುಕೊಂಡು ಹೋಗಿದ್ದ ರೂ. 45,000 ಮೌಲ್ಯದ ಚಿನ್ನದ ಸರದ ತುಂಡು ಹಾಗೂ ಅತ ಕೃತ್ಯಕ್ಕೆ ಬಳಸಿದ ಬೈಕ್ ಸ್ವಾಧೀನಪಡಿಸಿಕೊಂಡು ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!