ದೆಹಲಿ ಮುನ್ಸಿಪಲ್ ಕಾರ್ಪೊರೇಷನ್’ನಲ್ಲಿ ಆಪ್ ದರ್ಬಾರ್
ನವದೆಹಲಿ: ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) 134 ಸ್ಥಾನಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದೆ.
ಬಿಜೆಪಿ 103 ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್ 10 ಸ್ಥಾನಗಳನ್ನು ಪಡೆದು ತೃಪ್ತಿಪಟ್ಟುಕೊಂಡಿದೆ.
2017ರಲ್ಲಿ 270 ಮುನ್ಸಿಪಲ್ ವಾರ್ಡ್ ಗಳಲ್ಲಿ ಬಿಜೆಪಿ 181 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ AAP ಕೇವಲ 48 ಸ್ಥಾನಗಳನ್ನು ಗೆದ್ದುಕೊಂಡರೆ ಕಾಂಗ್ರೆಸ್ 30 ಸ್ಥಾನಗಳನ್ನು ಗಳಿಸಿತ್ತು.