ಕರ್ವೇಲು: ರಸ್ತೆ ಬದಿಯ ಗುಂಡಿಗೆ ಬಿದ್ದ ಕಾರು – ಮಹಿಳೆಗೆ ಗಾಯ
ಉಪ್ಪಿನಂಗಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕರ್ವೇಲು ಬಳಿ ಕಾರೊಂದು ರಸ್ತೆ ಬದಿಯ ಗುಂಡಿಗೆ ಬಿದ್ದ ಘಟನೆ ಡಿ.7ರಂದು ನಡೆದಿದ್ದು, ಅಪಘಾತದಿಂದ ಕಾರಿನಲ್ಲಿದ್ದ ಮಹಿಳೆಗೆ ತೀವ್ರ ಗಾಯವಾಗಿದೆ.
ವಸಂತ್ ಕುಮಾರ್ ಎಂಬವರು ಚಲಾಯಿಸುತ್ತಿದ್ದ ಕಾರು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಳಿಯೂರು ಗ್ರಾಮದ ಕರ್ವೇಲು ಎಂಬಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದಿತ್ತು. ಅಪಘಾತದಿಂದ ಕಾರಿನಲ್ಲಿದ್ದ ವಸಂತ್ ಕುಮಾರ್ ಅವರ ತಾಯಿ ಪಿ.ಕೆ.ಕುಮಾರಿ ಅವರಿಗೆ ತೀವ್ರ ಗಾಯವಾಗಿದ್ದು,ಅವರನ್ನು ಮಂಗಳೂರು ಫಸ್ಟ್‌ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.