ಸಂಪ್ಯ: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಸ್ಕೂಟರ್ ಡಿಕ್ಕಿ- ಆಸ್ಪತ್ರೆಗೆ ದಾಖಲು
ಪುತ್ತೂರು:ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರಿಗೆ ಸ್ಕೂಟರ್ ಡಿಕ್ಕಿಯಾದ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪ್ಯದಲ್ಲಿ ನಡೆದಿದೆ.

ರಸ್ತೆ ದಾಟಲೆಂದು ರಸ್ತೆ ಬದಿಯಲ್ಲಿ ನಿಂತಿದ್ದ ಆರ್ಯಾಪು ಗ್ರಾಮದ ಖಜಾನೆಮೂಲೆ ನಿವಾಸಿ ಧನಂಜಯ ಭಂಡಾರಿ ಗಾಯಗೊಂಡವರು.
ಕುಂಬ್ರ ಕಡೆಯಿಂದ ಸವಿತಾ ರೈ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಸ್ಕೂಟರ್ ಸಂಪ್ಯದಲ್ಲಿ ನಿಯಂತ್ರಣ ತಪ್ಪಿ, ರಸ್ತೆ ದಾಟಲೆಂದು ರಸ್ತೆ ಬದಿಯಲ್ಲಿ ನಿಂತಿದ್ದ ಧನಂಜಯ ಅವರಿಗೆ ಡಿಕ್ಕಿಯಾಗಿದೆ.ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊ೦ಡ ಧನ೦ಜಯ ಭಂಡಾರಿ ಅವರನ್ನು ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.