Uncategorized

ಗುಜರಾತ್ ಬಿಜೆಪಿ ಭಾರೀ ಮುನ್ನಡೆ; ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ತೀವ್ರ ಪೈಪೋಟಿ



ಗುಜರಾತ್‌ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಮತ ಎಣಿಕೆ ಪ್ರಾರಂಭಗೊಂಡಿದ್ದು, ಗುಜರಾತಿನಲ್ಲಿ ಆಡಳಿತಾರೂಢ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ.

ಪ್ರಾಥಮಿಕ ಸುತ್ತಿನ ಮತ ಎಣಿಕೆಯಲ್ಲಿ ಗುಜರಾತ್‌ನ 182 ಸ್ಥಾನಗಳ ಪೈಕಿ ಬಿಜೆಪಿ 148 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್‌ 22ರಲ್ಲಿ, ಆಮ್‌ ಆದ್ಮಿ 8 ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿವೆ.

ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದ್ದು 68 ಕ್ಷೇತ್ರಗಳ ಪೈಕಿ ಬಿಜೆಪಿ 30, ಕಾಂಗ್ರೆಸ್‌ 34 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

Leave a Reply

Your email address will not be published. Required fields are marked *

error: Content is protected !!