ಗುಜರಾತ್‌ನಲ್ಲಿ ಬಿಜೆಪಿ 154, ಹಿಮಾಚಲದಲ್ಲಿ ಕಾಂಗ್ರೆಸ್ 37 ಸ್ಥಾನಗಳಲ್ಲಿ ಮುನ್ನಡೆ
ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು ಸದ್ಯದ ಲೆಕ್ಕಾಚಾರ ಪ್ರಕಾರ ಗುಜರಾತ್‌ನಲ್ಲಿ ಬಿಜೆಪಿ 154, ಹಿಮಾಚಲದಲ್ಲಿ ಕಾಂಗ್ರೆಸ್ 37 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಗುಜರಾತ್ ನಲ್ಲಿ ಬಿಜೆಪಿಗೆ ನಿರೀಕ್ಷೆಗೂ ಮೀರಿದ ಯಶಸ್ಸು ಲಭಿಸಿದೆ. ಅತ್ತ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರದ ದಾಪುಗಾಲು ಇಡುತ್ತಿದೆ.