Uncategorized

ಹಿಮಾಚಲ ಪ್ರದೇಶ: ಸ್ವಂತ ಬಲದಿಂದ ಅಧಿಕಾರಕ್ಕೇರಲಿರುವ ಕಾಂಗ್ರೆಸ್- ಚುನಾವಣೆ ಸಂದರ್ಭ ಜನರಿಗೆ ನೀಡಲಾದ ಎಲ್ಲ ಆಶ್ವಾಸನೆಗಳನ್ನು ಆದಷ್ಟು ಬೇಗ ಈಡೇರಿಕೆ-ರಾಹುಲ್ ಗಾಂಧಿಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತ ಸಾಧಿಸಿ, ಸ್ವಂತ ಬಲದಿಂದ ಅಧಿಕಾರಕ್ಕೇರುವ ಸಿದ್ಧತೆ ಆರಂಭಿಸಿದೆ.

68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಗೆ ಡಿಸೆಂಬರ್‌ 1ರಂದು ಚುನಾವಣೆ ನಡೆದಿತ್ತು. ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಜಿದ್ದಾಜಿದ್ದಿಯ ಸ್ಪರ್ಧೆ ಏರ್ಪಟ್ಟಿತ್ತು.

ಕಾಂಗ್ರೆಸ್‌ ಈವರೆಗೆ 40 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ 21 ಕ್ಷೇತ್ರಗಳಲ್ಲಿ ಜಯ ಗಳಿಸಿದ್ದು, 4 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ‌ಮೂರು ಕ್ಷೇತ್ರಗಳು ಇತರರ ಪಾಲಾಗಿವೆ.

‘ಈ ವಿಜಯಕ್ಕೆ ಹಿಮಾಚಲ ಪ್ರದೇಶದ ಎಲ್ಲ ಮತದಾರರಿಗೆ ಹೃದಯ ಪೂರ್ವಕ ಧನ್ಯವಾದ ಹೇಳುತ್ತೇನೆ. ಕಾಂಗ್ರೆಸ್‌ನ ಎಲ್ಲ ಕಾರ್ಯಕರ್ತರು ಮತ್ತು ನಾಯಕರಿಗೆ ಶುಭಾಶಯ. ಈ ಜಯದ ಹಿಂದೆ ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆ ಇದೆ’ ಎಂದು ರಾಹುಲ್ ಗಾಂಧಿ ಟ್ವೀಟ್‌ ಮಾಡಿದ್ದಾರೆ.

‘ಚುನಾವಣೆ ಸಂದರ್ಭ ಜನರಿಗೆ ನೀಡಲಾದ ಎಲ್ಲ ಆಶ್ವಾಸನೆಗಳನ್ನು ಆದಷ್ಟು ಬೇಗ ಈಡೇರಿಸುತ್ತೇವೆ ಎಂದು ನಾನು ಮತ್ತೊಮ್ಮೆ ಭರವಸೆ ನೀಡುತ್ತೇನೆ’ ಎಂದೂ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!