Uncategorized

ಕೊನೆಗೂ ಬದುಕಿ ಬರಲಿಲ್ಲ ಬಾಲಕ: ಕೊಳವೆ ಬಾವಿಗೆ ಬಿದ್ದಿದ್ದ 8 ವರ್ಷದ ಬಾಲಕ ಮೃತ್ಯು

ಕೊಳವೆ ಬಾವಿಗೆ ಬಿದ್ದಿದ್ದ 8 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶ ರಾಜ್ಯದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ

70 ಗಂಟೆಗೂ ಹೆಚ್ಚು ಕಾಲ ನಡೆದ ಕಾರ್ಯಾಚರಣೆಯಲ್ಲಿ ಬಾಲಕನನ್ನು ಉಳಿಸಲು ಸಾಧ್ಯವಾಗಲಿಲ್ಲ.
ಬೋರ್‌ವೇಲ್‌ನಲ್ಲಿ 55 ಅಡಿ ಆಳದಲ್ಲಿ ಸಿಲುಕಿದ್ದ ಬಾಲಕ ತನ್ಮಯ್‌ನನ್ನು ರಕ್ಷಿಸುವ ರಕ್ಷಣಾ ಕಾರ್ಯಾಚರಣೆ ವಿಫಲವಾಗಿದೆ.

ಕೊಳವೆ ಬಾವಿಗೆ ಸಮಾನಾಂತರವಾಗಿ 35 ಅಡಿ ಆಳದವರೆಗೆ ಮತ್ತೊಂದು ಗುಂಡಿ ತೋಡಿ ಬಾಲಕನನ್ನು ರಕ್ಷಿಸುವ ಪ್ರಯತ್ನ ಮಾಡಲಾಗಿತ್ತು. ಬೋರ್‌ವೆಲ್‌ ಒಳಗೆ ಅಮ್ಲಜನಕ ಪೂರೈಕೆ ಮಾಡಲಾಗುತ್ತಿತ್ತು ಹಾಗೂ ಸಿಸಿ ಕ್ಯಾಮೆರಾ ಅಳವಡಿಸಿ ಮಗುವಿನ ಚಲನವಲನಗಳ ಮೇಲೆ ನಿಗಾ ವಹಿಸಲಾಗಿತ್ತು.

ಮಂಗಳವಾರ ಸಂಜೆಯಿಂದಲೇ ಬಾಲಕನಿಂದ ಯಾವುದೇ ಚಲನವಲನ ಕಂಡುಬಂದಿರಲಿಲ್ಲ.
ಕಾರ್ಯಾಚರಣೆ ಸಿಬ್ಬಂದಿ ಬಾಲಕನ ಶವವನ್ನು ಕೊಳವೆ ಬಾವಿಯಿಂದ ಮೇಲಕ್ಕೆ ತಂದರು.

Leave a Reply

Your email address will not be published. Required fields are marked *

error: Content is protected !!