ಕರಾವಳಿ

ಸುಳ್ಯ: ಮೇನಾಲ ಅಕ್ರಮ ಗಣಿಗಾರಿಕೆ ಆರೋಪ: ತಹಶೀಲ್ದಾರ್ ಅನಿತಾಲಕ್ಷ್ಮಿ ನೇತೃತ್ವದಲ್ಲಿ ದಿಢೀರ್ ದಾಳಿ

ಅಜ್ಜಾವರ ಗ್ರಾಮದ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ಕೆಂಪು ಕಲ್ಲುಗಣಿಗಾರಿಕೆ ಕಾರ್ಯ ಚಟುವಟಿಕೆ ನಡೆಯುತ್ತಿದೆ ಎಂಬ ಆರೋಪದಡಿಯಲ್ಲಿ ಇಂದು ಸಂಜೆ ಸುಳ್ಯ ತಹಶೀಲ್ದಾರ್ ಕು. ಅನಿತಾ ಲಕ್ಷ್ಮಿ ನೇತೃತ್ವದಲ್ಲಿ ದಿಡೀರ್ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವತಿಯಿಂದ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಅನಧಿಕೃತ ಉಪಖನಿಜ ಮತ್ತು ಗಣಿಗಾರಿಕೆ, ದಾಸ್ತಾನು, ಸಾಗಾಟಿಕೆ, ಮುಂತಾದ ಚಟುವಟಿಕೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ತಾಲೂಕು ವ್ಯಾಪ್ತಿಯಲ್ಲಿ ಕಾರ್ಯ ಪಡೆಯನ್ನು ರಚಿಸಲು ತಾಲೂಕಿನ ಅಧಿಕಾರಿಗಳನ್ನೊಳಗೊಂಡ ಚಾಲಿತ ತಂಡವನ್ನು ರಚಿಸಲಾಗಿದ್ದು, ಇದರ ಸಹಾಯವಾಣಿ ನಂಬರನ್ನು ಸಾರ್ವಜನಿಕರಿಗೆ ನೀಡಲಾಗಿದೆ.


ದೂರು ಬಂದ ಹಿನ್ನೆಲೆಯಲ್ಲಿ ಇಂದು ಈ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಇಂದಿನ ತಂಡದಲ್ಲಿ ತಹಶೀಲ್ದಾರ್ ಕು ಅನಿತಾಲಕ್ಷ್ಮಿ ಮತ್ತು ಆರ್ ಎಫ್ ಒ ಮಂಜುನಾಥ್, ಹಾಗೂ ಇತರ ಅಧಿಕಾರಿಗಳು ಭಾಗವಹಿಸಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!